ಅರಸ ಹಿಜ್ಕೀಯನ ಮತ್ತು ಸರ್ವೇಶ್ವರನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.