ಅಷ್ಟುಮಾತ್ರವಲ್ಲ, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ನಿಂದಿಸಿ ದೂಷಿಸುವುದಕ್ಕಾಗಿ ‘ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು’ ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದ್ದನು.