ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.