ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು,” ಎಂದರು.