ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು.