ಸಬ್ಬತ್ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ?