ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.