ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.