ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು.