ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು.