ಅನಂತರ ಅವನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಮಾಡಿದ್ದೇನು? ಯಾವ ತಪ್ಪಿಗಾಗಿ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಈ ಮಹಾ ಪಾತಕಕ್ಕೆ ಒಳಪಡಿಸಿದೆ? ಮಾಡಬಾರದ ಕಾರ್ಯವನ್ನು ನೀನು ಮಾಡಿದೆ,” ಎಂದು ಹೇಳಿದನು.