ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋದರು. ಸರ್ವೇಶ್ವರ ತಮಗೆ ಹೇಳಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬಿಸಾಡಿದಾಗ ಅದು ಸರ್ಪ ಆಯಿತು.