ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿಹಾಕಿ ಮಾಡಿದರು.