ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.
Go to Home Page