ದ್ರಾಕ್ಷಾರಸವನ್ನು ಹಾಗೂ ಮದ್ಯಪಾನವನ್ನು ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣಗಿದ ದ್ರಾಕ್ಷಿಹಣ್ಣನ್ನು ತಿನ್ನಬಾರದು.