ಸರ್ವೇಶ್ವರನ ಅಪ್ಪಣೆಯನ್ನು ಹೊಂದಿಯೇ ಅವರು ಪ್ರಯಾಣ ಮಾಡುತ್ತಿದ್ದರು. ಸರ್ವೇಶ್ವರನ ಅಪ್ಪಣೆಯನ್ನು ಪಡೆದು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.