ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.