ಆ ಮೇಘವು ದೇವದರ್ಶನದ ಗುಡಾರದಿಂದ ಅದೃಶ್ಯವಾದದ್ದೇ ಇಗೋ, ಮಿರ್ಯಾಮಳ ಚರ್ಮ ಹಿಮದಂತೆ ಬಿಳಿಚಿಕೊಂಡಿತ್ತು. ಆಕೆಗೆ ತೊನ್ನು ಹತ್ತಿತ್ತು. ಆರೋನನು ಆಕೆಯನ್ನು ನೋಡಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳಿದುಕೊಂಡನು.