ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.