ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.