ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.