ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಯೇಲರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗಾಗಿ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.