ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.