ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.