ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.