ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡಿದ್ದಾನೆ. ಅರಸ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂದು ಈ ದಿನ ನನಗೆ ಪ್ರಮಾಣ ಮಾಡಬೇಕೆಂದು ಬೇಡಿಕೊಳ್ಳುತ್ತಾನೆ,” ಎಂದು ತಿಳಿಸಿದರು.