ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.