ಸರ್ವೇಶ್ವರಸ್ವಾಮಿ ಇವನನ್ನು ಕುಷ್ಠರೋಗದಿಂದ ಶಿಕ್ಷಿಸಿದರು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.