ದೂರದ ಉತ್ತರದಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಗೋತ್ರಗಳ ಜನರು ತಮ್ಮ ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ರೊಟ್ಟಿ, ಅಂಜೂರ, ಒಣದ್ರಾಕ್ಷಿ, ದ್ರಾಕ್ಷಾರಸ, ಎಣ್ಣೆಗಳನ್ನು ಹೊತ್ತುತಂದರು. ಭೋಜನಕ್ಕೆ ಕುರಿದನಗಳನ್ನು ಸಹ ತೆಗೆದುಕೊಂಡು ಬಂದರು. ನಾಡಿನಲ್ಲೆಲ್ಲಾ ಸಂತೋಷ ಸಂಭ್ರಮವಿತ್ತು.
Go to Home Page