ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು.