ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸ ಸೊಲೊಮೋನನಿಗೆ 15,000 ಕಿಲೋಗ್ರಾಂಗಿಂತ ಹೆಚ್ಚು ಬಂಗಾರವನ್ನೂ ತಂದುಕೊಟ್ಟರು.