ಮಹಾಯಾಜಕನಾದ ಅಜರ್ಯನೂ ಎಲ್ಲ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠ ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಗಟ್ಟಿದರು. ಸರ್ವೇಶ್ವರ, ತನ್ನನ್ನು ದಂಡಿಸಿದ್ದಾರೆಂದು ಅವನಿಗೆ ತಿಳಿಯಿತು. ಎಂದೇ ಅವನು ಶೀಘ್ರವಾಗಿ ಹೊರಗೆಹೋದನು.