ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.