ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸವನ್ನು ಕುಡಿಯಲೇಬಾರದು.