ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.