ದೇವರು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೆಂಕಿಯನ್ನು ತೆಗೆದುಕೋ,” ಎಂದು ಅಪ್ಪಣೆಕೊಟ್ಟರು. ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.