ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು.