ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.