ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ಗುಂಪು ಅವನೊಂದಿಗಿತ್ತು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಮುಖರೂ ಅವರನ್ನು ಕಳುಹಿಸಿದ್ದರು.