ನೆರೆದಿದ್ದ ಜನರು ಮಾರನೆಯ ದಿನವೂ ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದ್ದರು. ಯೇಸು ಸ್ವಾಮಿ ಶಿಷ್ಯರೊಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟುಹೋಗಿದ್ದಾರೆಂದು ಅವರಿಗೆ ತಿಳಿದಿತ್ತು.