ಒಂದು ವೇಳೆ ಒಬ್ಬ ಸಹೋದರನಾಗಲಿ, ಸಹೋದರಿಯಾಗಲಿ ದಿನನಿತ್ಯ ಊಟಬಟ್ಟೆಗಿಲ್ಲದೆ ಇರುವಾಗ, ನಿಮ್ಮಲ್ಲಿ ಯಾರಾದರು ಅವರಿಗೆ ಅಗತ್ಯವಾದುದನ್ನು ನೀಡದೆ, “ಹೋಗು, ಸುಖವಾಗಿ ಬಾಳು, ಚಳಿ ಕಾಯಿಸಿಕೊ, ಹೊಟ್ಟೆ ತುಂಬಾ ತಿನ್ನು,” ಎಂದು ಬರೀ ಬಾಯಿಮಾತಿನಲ್ಲಿ ಉಪಚರಿಸಿದರೆ ಅದರಿಂದಾದ ಪ್ರಯೋಜನವೇನು?