ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.