ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.