ಯಾಜಕರು ಸರ್ವೇಶ್ವರನ ಆಲಯವನ್ನು ಶುದ್ಧಮಾಡುವುದಕ್ಕೆ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ಹೊರಗೆ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.