ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.