ಇತ್ತ ರಾಜ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, “ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ?” ಎಂದು ಕೇಳಿದನು. ಅವರು ರಾಜನಿಗೆ, “ಹೌದು ಪ್ರಭೂ, ಅದು ಸತ್ಯ,” ಎಂದು ಉತ್ತರಕೊಟ್ಟರು.